'ಉತ್ತಮ ಪ್ರಜಾಕೀಯ ಪಕ್ಷ'ಕ್ಕೆ ''ಆಟೋ ರಿಕ್ಷಾ'' ಚಿಹ್ನೆ ನೀಡಿದ ಚುನಾವಣಾ ಆಯೋಗ: ನಟ ಉಪೇಂದ್ರ ಟ್ವೀಟ್
ವಿಧಾನಸಭಾ ಚುನಾವಣೆ
ಬೆಂಗಳೂರು: ರಾಜ್ಯದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಎಲ್ಲ ರಾಜಕೀ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ನಟ ಉಪೇಂದ್ರ ಅವರ 'ಉತ್ತಮ ಪ್ರಜಾಕೀಯ ಪಕ್ಷ'ಕ್ಕೆ ಚುನಾವಣಾ ಆಯೋಗ 'ಆಟೋ ರಿಕ್ಷಾ' ಚಿಹ್ನೆ ನೀಡಿ ಆದೇಶ ಹೊರಡಿಸಿದ್ದು, ಈ ಆದೇಶದ ಪ್ರತಿಯನ್ನು ಉಪೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
'ಉತ್ತಮ ಪ್ರಜಾಕೀಯ ಪಾರ್ಟಿ' ಹೆಸರಿನಲ್ಲಿ ಉಪೇಂದ್ರ ಅವರು ಪಕ್ಷವೊಂದನ್ನು ಸ್ಥಾಪಿಸಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ. ಈಗಾಗಲೇ ಈ ಪಕ್ಷಕ್ಕೆ ಗ್ರಾಮ ಪಂಚಾಯತ್ ನಲ್ಲಿ ಬೆಂಬಲಿತ ಸದಸ್ಯ ಕೂಡ ಇದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷದಿಂದ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, ''ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ ಆಟೋ ರಿಕ್ಷಾ “ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು'' ಎಂದು ಬರೆದುಕೊಂಡಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್
— Upendra (@nimmaupendra) February 23, 2023
“ ಆಟೋ ರಿಕ್ಷಾ “ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು
Uttama Prajaakeeya party has got “Auto Riksha “ as common symbol for this Karnataka Assembly election 2023. Congratulations pic.twitter.com/RAQKU0TT8U