ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಳಾಯಿಬೆಟ್ಟು ಮುಷರಫ್ ಕುಟುಂಬಕ್ಕೆ ಮುಸ್ಲಿಮ್ ಸೆಂಟ್ರಲ್ ಕಮಿಟಿ ಆರ್ಥಿಕ ನೆರವು
Update: 2023-02-24 11:45 IST
ಮಂಗಳೂರು, ಫೆ.24: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಳಾಯಿಬೆಟ್ಟುವಿನ ಮುಷರಫ್ ಮನೆಗೆ ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜೆ ಕೆ.ಎಸ್.ಮುಹಮ್ಮದ್ ಮಸೂದ್ ಅವರು ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಸಿ. ಮಹ್ಮೂದ್, ಹಾಜಿ ಇಬ್ರಾಹೀಂ ಕೋಡಿಜಾಲ್, ಸೈಯದ್ ಅಹ್ಮದ್ ಬಾಷಾ ತಂಙಳ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಮತ್ತಿತರರು ಉಪಸ್ಥಿತರಿದ್ದರು.