×
Ad

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ

Update: 2023-02-24 12:22 IST

ಮಂಗಳೂರು, ಫೆ.24: ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಲ್ಲರ ಸಹಕಾರದಿಂದ ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.

2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕುಲದೀಪ್ ಕುಮಾರ್ ಅವರು, ಈ ಮೊದಲು ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದರು.

Similar News