ಆಂಧ್ರ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಝೀರ್
Update: 2023-02-24 17:56 IST
ವಿಜಯವಾಡ: ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್ ಅಬ್ದುಲ್ ನಝೀರ್ ಅವರು ಇಂದು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು. ಆಂಧ್ರ ಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನಝೀರ್ ಅವರಿಗೆ ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು.
ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಅವರ ಪತ್ನಿ ವೈ ಎಸ್ ಭಾರತಿ, ರಾಜ್ಯ ಸಚಿವರುಗಳು, ಶಾಸಕರು,ಉನ್ನತ ಅಧಿಕಾರಿಗಳು ಹಾಗೂ ಹೈಕೋರ್ಟ್ ನ್ಯಾಯಾಧೀಶರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದ ಹಿಂದಿನ ರಾಜ್ಯಪಾಲರಾದ ಬಿಸ್ವ ಭೂಷಣ್ ಹರಿಚಂದ್ರನ್ ಅವರನ್ನು ಛತ್ತೀಸಗಢಕ್ಕೆ ವರ್ಗಾಯಿಸಲಾಗಿದೆ.