ಮಡಿಕೇರಿ | ಬಟ್ಟೆ ವ್ಯಾಪಾರದಲ್ಲಿ ನಷ್ಟ: ವ್ಯಕ್ತಿ ಆತ್ಮಹತ್ಯೆ
Update: 2023-02-24 18:34 IST
ಮಡಿಕೇರಿ ಫೆ.24 : ಬಟ್ಟೆ ಮಳಿಗೆ ನಡೆಸುತ್ತಿದ್ದ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಡ್ಲಹಳ್ಳಿ ಗ್ರಾಮದ ನಿವಾಸಿ ಎಚ್.ಕೆ.ಸಂದೀಪ್ (40) ಮೃತ ವ್ಯಾಪಾರಿ ಎಂದು ತಿಳಿದು ಬಂದಿದೆ.
ಕಳೆದ 20 ವರ್ಷಗಳಿಂದ ನಾಪೊಕ್ಲುವಿನಲ್ಲಿ ಬಟ್ಟೆ ಮಳಿಗೆ ನಡೆಸುತ್ತಿದ್ದ ಸಂದೀಪ್ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರು ಎಂದು ಹೇಳಲಾಗಿದೆ. ನಾಪೋಕ್ಲು ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಇವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಧಾರವಾಡ | ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲಿಯೇ ಮೃತ್ಯು