ಪುರಸಭೆ, ನಗರ ಸ್ಥಳೀಯ ಸಂಸ್ಥೆಗಳ ವಾಹನ ಚಾಲಕರಿಗೆ ಸರಕಾರದಿಂದಲೇ ವೇತನಕ್ಕೆ ಕ್ರಮ: ಸಚಿವ ಮಾಧುಸ್ವಾಮಿ
Update: 2023-02-24 18:59 IST
ಬೆಂಗಳೂರು, ಫೆ.24: ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾಹನ ಚಾಲಕರು ಮತ್ತಿತರ ನೌಕರರಿಗೆ ಸರಕಾರದಿಂದಲೇ ವೇತನ ನೀಡುವ ಸಂಬಂಧ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಶೂನ್ಯವೇಳೆ ಜೆಡಿಎಸ್‍ನ ಸಾ.ರಾ.ಮಹೇಶ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಈ ವಿಚಾರ ಪರಿಷತ್ತಿನಲ್ಲಿ ನಿನ್ನೆ ಚರ್ಚೆಗೆ ಬಂದಾಗ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದಾರೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಹೊರ ಗುತ್ತಿಗೆ ನೌಕರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.