ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ದೇವಿಸಿಂಗ್ ಶೇಖಾವತ್ ನಿಧನ

Update: 2023-02-24 16:13 GMT

ಪುಣೆ, ಫೆ.24: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿಸಿಂಗ್ ಶೇಖಾವತ್ (89) ಅವರು ಹೃದಯಾಘಾತದಿಂದಾಗಿ ಶುಕ್ರವಾರ ಬೆಳಿಗ್ಗೆ ಪುಣೆಯ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಕುಟುಂಬದ ನಿಕಟ ಮೂಲಗಳು ತಿಳಿಸಿವೆ. ಅವರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕೃಷಿಕ,ಶಿಕ್ಷಣ ತಜ್ಞ ಮತ್ತು ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದ ಶೇಖಾವತ್ ಅಮರಾವತಿಯ ಮೊದಲ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವು ಗಣ್ಯರು ಶೇಖಾವತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Similar News