ವೈದೇಹಿ ಅವರಿಗೆ ಕಸಾಪದಿಂದ ಗೌರವ
Update: 2023-02-25 20:21 IST
ಉಡುಪಿ : ನಾಡಿನ ಪ್ರತಿಷ್ಠಿತ ಪ್ರಶಸ್ತಿಗಳ ಪೈಕಿ ನೃಪತುಂಗ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಾಹಿತಿ ವೈದೇಹಿ ಹಾಗೂ ಅವರ ಬಾಳ ಸಂಗಾತಿ ಶ್ರೀನಿವಾಸ ಮೂರ್ತಿ ಅವರನ್ನು ಅವರ ಸ್ವಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ಘಟಕದಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧಿಕಾರಿ ವಿ. ಮನೋಹರ್, ಕವಯಿತ್ರಿ ಸ್ಪೂರ್ತಿ ಗಿರೀಶ್, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಸದಸ್ಯರಾದ ಭುವನಪ್ರಸಾದ ಹೆಗ್ಡೆ, ನಾರಾಯಣ ಮಾಡಿ, ನರಸಿಂಹಮೂರ್ತಿ ಉಪಸ್ಥಿತರಿದ್ದರು