×
Ad

ರಾಜಗೋಪಾಲ ಆಚಾರ್ಯರಿಗೆ ‘ಸೇವಾಭೂಷಣ’ ಪ್ರಶಸ್ತಿ

Update: 2023-02-25 20:39 IST

ಉಡುಪಿ: ಯಕ್ಷಗಾನ ಕಲಾರಂಗದಲ್ಲಿ ಇಪ್ಪತ್ತೇಳು ವರ್ಷ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣ ಇವರ ನೆನಪಿನಲ್ಲಿ ಸಂಸ್ಥೆ ನೀಡುವ  ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ ನಿವೃತ್ತಅಧ್ಯಾಪಕ, ಸಾಮಾಜಿಕ ಕಳಕಳಿ ಹೊಂದಿರುವ ಯು.ಎಸ್. ರಾಜಗೋಪಾಲ ಆಚಾರ್ಯ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿ ಪ್ರದಾನ ಸಮಾರಂಭ ಮಾ.1ರ ಬುಧವಾರ ಸಂಜೆ 6ಗಂಟೆಗೆ ಪೇಜಾವರ ಮಠದ ಶ್ರೀರಾಮಠಲ ಸಭಾಭವನದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥರ ಉಪಸ್ಥಿತಿಯಲ್ಲಿ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

Similar News