ವಿಜಯಪುರ| ಗುಡಿಸಲಿಗೆ ಆಕಸ್ಮಿಕ ಬೆಂಕಿ: ಇಬ್ಬರು ಸಜೀವ ದಹನ

Update: 2023-02-26 04:57 GMT

ವಿಜಯಪುರ: ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಇಲ್ಲಿನ ನಿವಾಸಿಗಳಾದ ಕರೀಂಸಾಬ್ ಇಮಾಮಸಾಬ್ ಟಪಾಲ (82), ಸಾಜನಬಿ ಕರೀಂಸಾಬ್ ಟಪಾಲ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಗುಡಿಸಲಿನಲ್ಲಿ ಮಲಗಿದ್ದ ವೇಳೆ ಚಿಮಣಿಯಿಂದ ಬೆಂಕಿ ತಗಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಗುಡಿಸಲು ಸುಟ್ಟು ಭಸ್ಮವಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News