×
Ad

ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಕಲ್ಲು ತೂರಾಟ

Update: 2023-02-26 11:20 IST

ಬೆಂಗಳೂರು: ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ (20607) ಗೆ ಕಿಡಿಗೇಡಿಗಳು ಮತ್ತೆ ಕಲ್ಲು ತೂರಾಟ ನಡೆಸಿರುವ ಘಟನೆ ( ಫೆ.26ರಂದು) ನಡೆದಿರುವುದಾಗಿ ವರದಿಯಾಗಿದೆ.

ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. ಕಲ್ಲು ತೂರಾಟದಿಂದ ರೈಲಿನ ಎರಡು ಕಿಟಕಿಯ ಗಾಜುಗಳಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಲ್ಲು ತೂರಾಟ, ಕಿಟಕಿ ಗಾಜು ಜಖಂ

Similar News