ಪುಲ್ವಾಮಾ: ಭಯೋತ್ಪಾದಕರ ಗುಂಡಿನ ದಾಳಿಗೆ ಕಾಶ್ಮೀರದ ನಿವಾಸಿ ಬಲಿ
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ನಡೆಸಿರುವ ಉದ್ದೇಶಿತ ದಾಳಿಯಲ್ಲಿ ಹಿಂದೂ ನಾಗರಿಕನೊಬ್ಬನನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಬಲಿಯಾದವರನ್ನು ಅಚಾನ್‌ನ ಕಾಶ್ಮೀರಿ ಹಿಂದೂ ನಿವಾಸಿ ಸಂಜಯ್ ಶರ್ಮಾ ಎಂದು ಗುರುತಿಸಲಾಗಿದೆ, ಅವರು ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದಾರೆ.
ಅವರನ್ನು ಸಮೀಪದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಶರ್ಮಾ ಅವರು ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
"ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಪುಲ್ವಾಮ ಜಿಲ್ಲೆಯ ಕಾಶಿನಾಥ್ ಶರ್ಮಾ ಅವರ ಪುತ್ರ ಸಂಜಯ್ ಶರ್ಮಾ ಎಂಬ ಅಲ್ಪಸಂಖ್ಯಾತರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಗಾಗಿ ಗ್ರಾಮದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ