ಹುಣಸೋಡು ಸ್ಫೋಟ ಪ್ರಕರಣದ ಸಂತ್ರಸ್ತರಿಗೆ ಸಿಗದ ಪರಿಹಾರ: ಶಿವಮೊಗ್ಗದಲ್ಲಿ ಕರಿ ಪತಾಕೆ ಪ್ರದರ್ಶನ
Update: 2023-02-27 09:53 IST
ಶಿವಮೊಗ್ಗ, ಫೆ.27: ಎರಡು ವರ್ಷಗಳ ಹಿಂದೆ ನಡೆದ ಹುಣಸೋಡು ಸ್ಫೋಟ ಪ್ರಕರಣದ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಗದಿರುವುದನ್ನು ಖಂಡಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಇಂದು ಬೆಳಗ್ಗೆ ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರು.
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಗರದ ಗೋಪಿವೃತ್ತದಲ್ಲಿ ನವಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಕಪ್ಪುಬಟ್ಟೆ ಬಾವುಟ ಪ್ರದರ್ಶಿಸಿ, ಹುಣಸೋಡು ಸ್ಫೋಟ ನಡೆದು ಎರಡು ವರ್ಷಗಳೇ ಕಳೆದಿವೆ. ಆದರೆ ಸಂತ್ರಸ್ತರಿಗೆ ಇನ್ನೂ ಪರಿಹಾರ ನೀಡಿಲ್ಲ. ರಾಜ್ಯ ಸರಕಾರದ ನಡೆ ಜನವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಪ್ಪು ಬಾವುಟ ಪ್ರದರ್ಶಿಸಿದ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದುಕೊಂಡರು.
2021ರ ಜ.21ರಂದು ಸಂಭವಿಸಿದ ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದರು.