ಅಗ್ನಿಪಥ್ ವಿರುದ್ಧದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ದಿಲ್ಲಿ ಹೈಕೋರ್ಟ್
Update: 2023-02-27 11:44 IST
ಹೊಸದಿಲ್ಲಿ: ಅಗ್ನಿಪಥ್ ಸಶಸ್ತ್ರ ಪಡೆಗಳ ನೇಮಕಾತಿ ಯೋಜನೆಯ ವಿರುದ್ಧದ ಎಲ್ಲಾ ಅರ್ಜಿಗಳನ್ನು ದಿಲ್ಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಅದರಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿಕೆ ನೀಡಿದ್ದಾಗಿ ANI ವರದಿ ಮಾಡಿದೆ.
ಸಶಸ್ತ್ರ ಪಡೆಗಳು ʼಉತ್ತಮವಾಗಿ ಸಜ್ಜಾಗಿವೆʼ ಎಂಬುವುದನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನೇಮಕಾತಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಸುಮಾರು 23 ಅರ್ಜಿಗಳು ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಅದರಲ್ಲಿ ಐದು ಅರ್ಜಿಗಳು ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿವೆ.