ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Update: 2023-02-27 10:06 GMT

ಶಿವಮೊಗ್ಗ, ಫೆ.27: ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ 449 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಲೋಕಾರ್ಪಣೆಗೊಳಿಸಿದರು.

ಬಳಿಕ 'ಸಿರಿಗನ್ನಡಂ ಗೆಲ್ಗೆ'  ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ, ಶಿವಮೊಗ್ಗದ ಜನರ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಈ ಸಂದರ್ಭ ವೇದಿಕೆಯಲ್ಲಿದ್ದರು.

ಇದೇವೇಳೆ ನರೇಂದ್ರ ಮೋದಿಯವರು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿದರು.

775 ಎಕರೆ ಪ್ರದೇಶದಲ್ಲಿ ತಲೆಯೆತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣವು  3,04 ಕಿ.ಮೀ. ಉದ್ದದ ರನ್ ವೇಯನ್ನು ಹೊಂದಿದೆ.

ಇದಕ್ಕೂ ಮೊದಲು ಹೊಸದಿಲ್ಲಿಯಿಂದ ಸೇನಾ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ಶಿವಮೊಗ್ಗದ ಸೋಗಾನೆಯಲ್ಲಿರುವ ನೂತನ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

Similar News