×
Ad

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ಸಾಧನಾ ರಾಜ್ಯ ವಿಶೇಷ ಪುರಸ್ಕಾರ

Update: 2023-02-27 19:13 IST

ಮಂಗಳೂರು: ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ರಿ. ಮಂಗಳೂರು,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಡು ನುಡಿ ಸಾಹಿತ್ಯ ಸಮ್ಮೇಳನದಲ್ಲಿ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಕ್ರೀಡಾ ವರದಿಗಾರಿಕೆಗಾಗಿ ನೀಡಿದ  ಸಾಧನಾ ರಾಜ್ಯ ವಿಶೇಷ ಪ್ರಶಸ್ತಿಯನ್ನು ಕನ್ನಡ ಸಿನಿಮಾ ರಂಗದ ಹಿರಿಯ ನಟ ದೊಡ್ಡಣ್ಣ ಇವರಿಂದ ಸ್ವೀಕರಿಸಿದರು.

ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ವಿವಿಧ ಪತ್ರಿಕೆಗಳಲ್ಲಿ ಗುರುತಿಸಿಕೊಂಡಿರುವ ಇವರು ರಾಜ್ಯ ಹಾಗೂ ಜಿಲ್ಲಾ ಮಟ್ಟದ  ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು,‌ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್. ಗಣೇಶ ರಾವ್,  ಕರ್ನಾಟಕ ಬ್ಯಾಂಕ್ ಚೇರ್ ಮನ್ ಮಹಾಬಲೇಶ್ವರ ರಾವ್ , ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥರಾದ ಪ್ರದೀಪ್ ಕುಮಾರ್ ಕಲ್ಕೂರ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು , ಹಿರಿಯ ಸಾಹಿತಿ ಇರಾ ನೇಮು ಪೂಜಾರಿ, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ , ಸಂಚಾಲಕಿ ಲತಾ ಕೃಷ್ಣದಾಸ್ , ಯುಗಪುರುಷ ಮಾಸ ಪತ್ರಿಕೆಯ ಸಂಪಾದಕ ಭುವನಾಭಿರಾಮ ಉಡುಪ ಮೊದಲಾದವರು ಉಪಸ್ಥಿತರಿದ್ದರು.

Similar News