ಮಾರ್ಚ್‌ 4ರವರೆಗೆ ಮನೀಶ್‌ ಸಿಸೋಡಿಯಾ ಸಿಬಿಐ ಕಸ್ಟಡಿಗೆ

Update: 2023-02-27 15:38 GMT

ಹೊಸದಿಲ್ಲಿ: ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ಕಳುಹಿಸಲಾಗಿದೆ ಎಂದು indianexpress.com ವರದಿ ಮಾಡಿದೆ. ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅವರನ್ನು ಇಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಿಸೋಡಿಯಾರನ್ನು ಹಾಜರುಪಡಿಸಿದಾಗ ರೂಸ್ ಅವೆನ್ಯೂ ನ್ಯಾಯಾಲಯದ ಆವರಣದಲ್ಲಿ ಮತ್ತು ಹೊರಗೆ ಭಾರೀ ಭದ್ರತೆ ನಿಯೋಜಿಸಲಾಗಿತ್ತು. ವಿಶೇಷ ನ್ಯಾಯಾಧೀಶ ಎಂ.ಕೆ ನಾಗ್‌ಪಾಲ್ ಆದೇಶವನ್ನು ಕಾಯ್ದಿರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಿಸೋಡಿಯಾ ಬಂಧನ ವಿರೋಧಿಸಿ ಆಪ್ ಬೆಂಬಲಿಗರು ದೇಶಾದ್ಯಂತ ಪ್ರತಿಭಟನೆ ನಡೆಸಿದರು. ದಿಲ್ಲಿಯ ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಅರೆಸೈನಿಕ ಪಡೆಗಳೊಂದಿಗೆ ಘರ್ಷಣೆ ನಡೆಸಿದ ನಂತರ ಹಲವಾರು ಆಪ್ ಬೆಂಬಲಿಗರನ್ನು ಬಂಧಿಸಲಾಯಿತು. ಅವರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್ ನಡೆಸಿದರು ಎಂದು ವರದಿ ಉಲ್ಲೇಖಿಸಿದೆ.

Similar News