15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ‘ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ

Update: 2023-02-27 15:22 GMT

ಬೆಂಗಳೂರು, ಫೆ. 27: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6-8) ನೇಮಕಾತಿಗೆ ಸಂಬಂಧಿಸಿದಂತೆ ‘ಪರಿಷ್ಕೃತ 1ಃ1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಸೋಮವಾರ https//schooleducation.kar.nic.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. 

ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮಾ.1ರಿಂದ ಮಾ.4ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರಿಗೆ ಹಾಗೂ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದೆ.  

ಹಿಂದೆ 1ಃ1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಶಿಕ್ಷಣ ಇಲಾಖೆಯು ಪ್ರಕಟಿಸಿತ್ತು. ವಿವಾಹಿತ ಹೆಣ್ಣುಮಕ್ಕಳನ್ನು ಅರ್ಜಿಯನ್ನು ಸಲ್ಲಿಸಿದಾಗ, ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ ತಂದೆಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿರುತ್ತಾರೆ. ಹಾಗಾಗಿ ಅಂತವರನ್ನು ಕೇವಲ ಸಾಮಾನ್ಯ ವರ್ಗಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿತ್ತು. 

ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಅವರನ್ನು ಪರಿಗಣಿಸಿ ಪಟ್ಟಿಯನ್ನು ಪ್ರಕಟಿಸುವಂತೆ ತಿಳಿಸಿತ್ತು. 

Similar News