ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸದ್ಯಕ್ಕೆ ಟೋಲ್ ಸಂಗ್ರಹ ಇಲ್ಲ: ಸಂಸದ ಪ್ರತಾಪ್ ಸಿಂಹ
ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ನಲ್ಲಿ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹವನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು, 'ಸೇವಾ ರಸ್ತೆಗಳ (service roads) ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಪಡೆಯುವುದಿಲ್ಲ' ಎಂದು ಹೇಳಿದ್ದಾರೆ.
'ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳಿಗೆ ಎಕ್ಸ್ ಪ್ರೆಸ್ ಹೈವೆ ನಲ್ಲಿ ಸಂಚರಿಸಲು ಅವಕಾಶವಿರಲಿದೆ. ಸರ್ವೀಸ್ ರಸ್ತೆ ಪೂರ್ಣಗೊಂಡ ಬಳಿಕ ಅಪಘಾತ ಮುಕ್ತ ರಸ್ತೆಯನ್ನಾಗಿಸುವ ಉದ್ದೇಶದಿಂದಾಗಿ ಅವುಗಳಿಗೆ ಅವಕಾಶ ಕೊಡುವುದಿಲ್ಲ. ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳು ಸರ್ವೀಸ್ ರಸ್ತೆಯನ್ನು ಬಳಸಿಕೊಳ್ಳಬಹುದು. ಇದರಿಂದ ಅವರು ಟೋಲ್ ಪಾವತಿಸುವುದು ಕೂಡ ತಪ್ಪಲಿದೆ' ಎಂದು ತಿಳಿಸಿದ್ದಾರೆ.
ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹರದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹೊರಡಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಬರುವ ಬೆಂಗಳೂತು ನಗರ ಜಿಲ್ಲೆಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಬೆಂಗಳೂರು-ನಿಡಗಟ್ಟ ವಿಭಾಗದ 6 ಲೇನ್ ಗಳ ಬಳಕೆಗಾಗಿ ಟೋಲ್ ಶುಲ್ಕ ಅನ್ವಯವಾಗಲಿದೆ. ಇದು 55.63 ಕಿ.ಮೀ. ಇದ್ದು, ಟೋಲಿಂಗ್ ರಸ್ತೆಯಾಗಿದೆ ಎಂದು ಪ್ರಾಧಿಕಾರ ತಿಳಿಸಿತ್ತು.
Toll collection, Deferred till the completion of service roads. pic.twitter.com/kDWIMvt5y9
— Pratap Simha (@mepratap) February 27, 2023