ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ
Update: 2023-02-28 12:01 IST
ಬೆಂಗಳೂರು: ವ್ಯಕ್ತಿಯೊಬ್ಬರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ಮಂಗಳವಾರ ವರದಿಯಾಗಿದೆ.
ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿಯಾಗಿದ್ದು, ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ಘಟನೆ ನಡೆದಿದೆ.
ರಾತ್ರಿ ಜಿಮ್‌ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್‌ನನ್ನು ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಖತ್ ಮೃತದೇಹ ಪತ್ತೆಯಾಗಿದೆ.
ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.