×
Ad

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Update: 2023-02-28 13:23 IST

ಬಂಟ್ವಾಳ: ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ತಿಮ್ಮಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸೋಮವಾರ ಸಂಜೆ 6.15 ವೇಳೆಗೆ ರಾಮಲಕಟ್ಟೆಯಲ್ಲಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅದೇ ಮಾರ್ಗವಾಗಿ ಮಂಗಳೂರು ಕಡೆ ಸಂಚರಿಸುತ್ತಿದ್ದ ತಿಮ್ಮಪ್ಪ ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ತಿಮ್ಮಪ್ಪ ಅವರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯರು ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ 8.15 ರ ವೇಳೆಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ನಾವೂರು-ಸುಲ್ತಾನಕಟ್ಟೆ ನಿವಾಸಿ ಸೀತಾರಾಮ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News