ಚೆನ್ನೈ ಆಸ್ಪತ್ರೆಗೆ ದಾಖಲಾದ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ
Update: 2023-02-28 13:43 IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಕಿಡ್ನಿ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಪ್ರಹ್ಲಾದ್ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಕಿರಾಣಿ ಅಂಗಡಿ ಹಾಗೂ ಟೈರ್ ಶೋರೂಮ್ ಹೊಂದಿದ್ದಾರೆ. ಆಗಸ್ಟ್ 2, 2022 ರಂದು, ಪ್ರಹ್ಲಾದ್ ಮೋದಿ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ ಹಲವಾರು ಸದಸ್ಯರೊಂದಿಗೆ ಸಂಘಟನೆಯ ವಿವಿಧ ಬೇಡಿಕೆಗಳೊಂದಿಗೆ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿದ್ದರು.
ಕಳೆದ ವರ್ಷ ಡಿಸೆಂಬರ್ 27 ರಂದು ಪ್ರಹ್ಲಾದ್ ಮೋದಿ ಕುಟುಂಬ ಸಮೇತ ಬಂಡೀಪುರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತಕ್ಕೀಡಾಗಿತ್ತು.