BBMP ಪೌರಕಾರ್ಮಿಕರ ಧರಣಿ ಎರಡನೇ ದಿನಕ್ಕೆ ಅಂತ್ಯ

Update: 2023-02-28 16:34 GMT

ಬೆಂಗಳೂರು, ಫೆ.28: ಪ್ರಸ್ತುತ ಚಾಲನೆಯಲ್ಲಿರುವ 3,673 ಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು, ಎಲ್ಲ 16 ಸಾವಿರ ಪೌರಕಾರ್ಮಿಕರನ್ನು ಏಕಕಾಲಕ್ಕೆ ಖಾಯಂ ಗೊಳಿಸಲಾಗುವುದು ಎಂದು ಸಿಎಂ ಕಾರ್ಯದರ್ಶಿ ಜಯರಾಮ್ ರಾಯಪುರ್ ತಿಳಿಸಿದ್ದು, ಪೌರಕಾರ್ಮಿಕರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ.

ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾ ನಿರತ ಪೌರಕಾರ್ಮಿಕರನ್ನು ಉದ್ದೇಶಿಸಿ ಮಾತಾನಾಡಿದ ಜಯರಾಮ್, ಈಗಾಗಲೇ ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಕಡತವು ಮುಖ್ಯಮಂತ್ರಿಗಳ ಪರಿಶೀಲನೆಯಲ್ಲಿದ್ದು, ಇನ್ನೂ ಒಂದೆರೆಡು ದಿನಗಳಲ್ಲಿ ಒಪ್ಪಿಗೆ ಸಿಗುತ್ತದೆ. ಒಂದೆರಡು ವಾರದೊಳಗೆ, ಮಂಜೂರಾತಿ ಅಧಿಸೂಚನೆ ಹೋರಡಿಸಲಾಗುವುದು ಎಂದರು.

ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಧರಣಿ ಹೋರಾಟ ನಡೆಸುತ್ತಿತ್ತು.  ಬಿಬಿಎಂಪಿಯಲ್ಲಿ ಸುಮಾರು 16ಸಾವಿರ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಕೇವಲ 3673 ಕಾರ್ಮಿಕರನ್ನು ಮಾತ್ರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಉಳಿದ  ಸುಮಾರು 12,500 ಪೌರಕಾರ್ಮಿಕರಿಗೆ ಅನ್ಯಾಯವೆಸಗಲಾಗಿದೆ ಎಂದು ಪೌರಕಾರ್ಮಿಕರು ಆರೋಪಿಸಿದ್ದರು.

Similar News