×
Ad

ಅಂಗನವಾಡಿ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

Update: 2023-02-28 21:04 IST

ಉಡುಪಿ, ಫೆ.28: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿ ನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಇತರೆ ಮೀಸಲಾತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ದೂ.ಸಂಖ್ಯೆ:08258-230992ನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Similar News