ಬ್ರಹ್ಮಾವರ: ಕೆರಾಡಿಯ ಯುವತಿ ನಾಪತ್ತೆ
Update: 2023-02-28 22:00 IST
ಉಡುಪಿ, ಫೆ.28: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ, ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿ ಫೆ.26ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ.(08254) 258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434 , ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.