×
Ad

ಆಸ್ಪತ್ರೆಗೆ ದಾಖಲು | ಆತಂಕ ಪಡುವ ಅಗತ್ಯವಿಲ್ಲ, ಒಂದೆರಡು ದಿನಗಳಲ್ಲಿ ಮನೆಗೆ ಮರಳುವೆ: ಎಚ್.ಡಿ ದೇವೇಗೌಡ

Update: 2023-02-28 22:17 IST

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಈ ಕುರಿತು  ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ದೇವೇಗೌಡ ಅವರು, 'ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಗಾಬರಿ ಅಥವಾ ಆತಂಕ ಪಡುವ ಅಗತ್ಯವಿಲ್ಲ. ಒಂದೆರಡು ದಿನಗಳಲ್ಲಿ ಮನೆಗೆ ಹಿಂದಿರುಗುತ್ತೇನೆ' ಎಂದು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ 10:30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆಪಡೆಯುತ್ತಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರ ನಿಗಾದಲ್ಲಿದ್ದಾರೆ. ಸದ್ಯ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Similar News