×
Ad

ಮಾ.3ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್ ಸುರ್ಜೇವಾಲ ಉಡುಪಿಗೆ

Update: 2023-03-01 20:24 IST

ಉಡುಪಿ, ಮಾ.1: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್  ಪಕ್ಷದ  ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ   ಉಸ್ತುವಾರಿಗಳೂ ಆದ ರಣ್‌ದೀಪ್ ಸುರ್ಜೆವಾಲ ಅವರು ಮಾ.3ರಂದು  ಶುಕ್ರವಾರ ಬೆಳಗ್ಗೆ 9:30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ.

ಸುರ್ಜೆವಾಲ ಅವರು ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆ ಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ಗ್ಯಾರಂಟಿ  ಕಾರ್ಡ್‌ಗಳನ್ನು ಬಿಡುಗಡೆಗೊಳಿಸುವರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ನಲ್ಲಿ ವಿಪಕ್ಷ ನಾಯಕರಾದ ಬಿ.ಕೆ. ಹರಿಪ್ರಸಾದ್,  ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್,  ಕೆಪಿಸಿಸಿ  ಕಾರ್ಯಾಧ್ಯಕ್ಷ  ಹಾಗೂ ಮೈಸೂರು ವಿಭಾಗದ ಉಸ್ತುವಾರಿಗಳಾದ ಆರ್.ಧ್ರುವನಾರಾಯಣ, ಎಐಸಿಸಿ ಕಾರ್ಯದರ್ಶಿ ಮತ್ತು ಮೈಸೂರು ವಿಭಾಗದ ಉಸ್ತುವಾರಿ ರೋಝೀ ಜೋನ್, ವಿಧಾನಪರಿಷತ್ತಿನ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಅಭಯಚಂದ್ರ ಜೈನ್,ಮಾಜಿ ಸಚಿವ  ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಎಂ.ಎ.ಗಪೂರ್, ಮಿಥುನ್ ರೈ, ಮಮತಾ ಗಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ ಮುಂತಾದವರು ಉಪಸ್ಥಿತರಿರುವರು ಎಂದುಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News