ಜೆಡಿಎಸ್ ಹಿರಿಯ ಶಾಸಕ ಎ.ಟಿ. ರಾಮಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ: ಡಿ.ಕೆ. ಶಿವಕುಮಾರ್

''ಮಾ.7-8ರ ಸಭೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ''

Update: 2023-03-01 15:43 GMT

ಹಾಸನ: ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಜೊತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಶೀಘ್ರದಲ್ಲೇ ಸೇರ್ಪಡೆಗೊಳ್ಳಲಿದ್ದಾರೆ. ಹಾಸನ ಕ್ಷೇತ್ರದ ಜೆಡಿಎಸ್ ಮುಖಂಡ ಎಚ್.ಪಿ. ಸ್ವರೂಪ್ ಜೊತೆ ಕೂಡ ಮಾತುಕತೆ ನಡೆಸುತ್ತಿದ್ದೇವೆ, ಶೀಘ್ರದಲ್ಲೇ ನಿರ್ಧಾರ ತಿಳಿಸಲಿದ್ದಾರೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರವಾಗಿ ಇದೇ ತಿಂಗಳು 7 ಮತ್ತು 8ನೇ ತಾರಿಖು ಸ್ಕ್ರೀನಿಂಗ್ ಕಮಿಟಿ ಇದೆ. ಸಭೆ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗುವುದು'' ಎಂದರು.

''ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಿ ಕಳಕಿಂತ ಹೆಸರು ತೆಗೆದು ಅಭಿವೃದ್ಧಿ ಶಿಲ ರಾಜ್ಯವನ್ನಾಗಿ ಕಾಂಗ್ರೆಸ್ ಮಾಡುತ್ತದೆ. ಬೆಲೆ ಏರಿಕೆಯಿಂದ ತೊಂದರೆಗೊಳಗಾದ ಪ್ರತಿ ಕುಟುಂಬಕ್ಕೆ ಕಾಂಗ್ರೆಸ್ ಸಹಾಯ ಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಯಾರ ಬೆಂಬಲವೂ ಇಲ್ಲದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲಿ ಭ್ರಷ್ಟ ಸರ್ಕಾರ ಎಂದು ಬಿಜೆಪಿ ಹೆಸರು ಪಡೆದಿದೆ. ಬಿಜೆಪಿ ನೀಡಿದ 600 ಭರವಸೆಯಲ್ಲಿ ಕೆವಲ 50 ಭರವಸೆ ಮಾತ್ರ ಈಡೇರಿಕೆ ಮಾಡಿದೆ'' ಎಂದು ಕಿಡಿಕಾರಿದರು. 

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ. ಮಾಜಿ ಸಚಿವ ಎಚ್.ಎಂ. ರೇವಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ, ಹೆಚ್.ಕೆ. ಜವರೇಗೌಡ, ಹೆಚ್.ಕೆ. ಮಹೇಶ್, ಬನವಾಸೆ ರಂಗಸ್ವಾಮಿ, ಬಿ.ಪಿ. ಮಂಜೇಗೌಡ, ಸುದೀರ್, ಮುನಿಸ್ವಾಮಿ, ವಿನಯ್ ಗಾಂಧಿ, ಅಶೋಕ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Similar News