ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ: ಬೆಂಬಲಿಗರ ಸಭೆಯಲ್ಲಿ ನಿರ್ಣಯ

Update: 2023-03-02 05:01 GMT

ಹಾಸನ, ಮಾ. 2: ಬುಧವಾರ ರಾತ್ರಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರ ಬೆಂಬಲಿಗರು ಸಭೆ ನಡೆಸಿದ್ದು, ಕಾಂಗ್ರೆಸ್ ಸೇರುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. 

ಈಗಾಗಲೇ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದ ಶಿವಲಿಂಗೇಗೌಡ, ಈ ಬಗ್ಗೆ ಕಾರ್ಯಕರ್ತರ ಹಾಗೂ ಬೆಂಬಲಿಗರ ತೀರ್ಮಾನವೇ ಅಂತಿಮ ಎಂದು ಎರಡು ವಾರಗಳ ಹಿಂದೆ ಹೇಳಿದ್ದರು.

ಮಾರ್ಚ್ 5 ರಂದು ಅರಸೀಕೆರೆ ತಾಲೂಕಿನ ಗುತ್ತಿನಗೆರೆ ಗ್ರಾಮದಲ್ಲಿ ಆಯೋಜನೆಗೊಂಡಿರುವ ಸಂಗೊಳ್ಳಿರಾಯಣ್ಣ ಪ್ರತಿಮೆ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಇದಕ್ಕೂ ಮೊದಲು ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ಶಾಸಕ ಶಿವಲಿಂಗೇಗೌಡ ಅವರು ಅರಸೀಕೆರೆಯ ತೋಟದ ಮನೆಯಲ್ಲಿ ಬೆಂಬಲಿಗರ ಸಭೆ ಕರೆದಿದ್ದರು. ಈಗ ಈ ಸಭೆಯಲ್ಲಿ ಕಾಂಗ್ರೆಸ್ ಸೇರಲು ಸಹಮತ ಸಿಕ್ಕಿದೆ.

ಮೊಬೈಲ್ ಟಾರ್ಚ್ ಆನ್ ಮಾಡುವುದರ ಮೂಲಕ ಅವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಹಿರಿಯ ಶಾಸಕ ಎ.ಟಿ. ರಾಮಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ: ಡಿ.ಕೆ. ಶಿವಕುಮಾರ್

ಇದನ್ನೂ ಓದಿ: ಹಾಸನ | ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು 

Similar News