ಚುನಾವಣಾ ಆಯುಕ್ತರ ನೇಮಕಾತಿ ಕುರಿತು ಸಮಿತಿ ರಚನೆ ಆದೇಶಿಸಿದ ಸುಪ್ರೀಂ ಕೋರ್ಟ್

Update: 2023-03-02 05:57 GMT

ಹೊಸದಿಲ್ಲಿ: ಮಹತ್ವದ ತೀರ್ಪಿನಲ್ಲಿ ಚುನಾವಣಾ ಆಯೋಗದ ಉನ್ನತ ನೇಮಕಾತಿಗಳಿಗಾಗಿ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ ಎಂದು NDTV ವರದಿ ಮಾಡಿದೆ.

5-0 ಸರ್ವಾನುಮತದ ತೀರ್ಪಿನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರನ್ನು ತ್ರಿಸದಸ್ಯ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಮಾಡುತ್ತಾರೆ ಎಂದು ಹೇಳಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠವು ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯಲ್ಲಿ ಏಕೈಕ ದೊಡ್ಡ ವಿರೋಧ ಪಕ್ಷದ ನಾಯಕ ಸಮಿತಿಯಲ್ಲಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ಚುನಾವಣಾ ಆಯುಕ್ತರು ಹಾಗೂ  ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿ ಪೀಠವು ತನ್ನ ತೀರ್ಪು ನೀಡಿದೆ.

Similar News