×
Ad

2020ರ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಖುಲಾಸೆ, ಓರ್ವ ದೋಷಿ

Update: 2023-03-02 13:59 IST

ಹೊಸದಿಲ್ಲಿ: ದೇಶಾದ್ಯಂತ ತೀವ್ರ  ಪ್ರತಿಭಟನೆಗೆ ಕಾರಣವಾಗಿದ್ದ 2020ರಲ್ಲಿ  ಹತ್ರಾಸ್ ನಲ್ಲಿ  ದಲಿತ ಯುವತಿಯ ಮೇಲೆ ನಡೆದಿರುವ  ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಉತ್ತರ ಪ್ರದೇಶದ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದ್ದು, ಇತರ ಮೂವರನ್ನು ಖುಲಾಸೆಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

20 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಹದಿನೈದು ದಿನಗಳ ನಂತರ ದಿಲ್ಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಜಿಲ್ಲಾಡಳಿತವು ಯುವತಿಯ  ಗ್ರಾಮದಲ್ಲಿ ಮಧ್ಯರಾತ್ರಿ ವೇಳೆ  ಅಂತ್ಯಕ್ರಿಯೆ ನಡೆಸಿತ್ತು. ಕೃತ್ಯವನ್ನು ಮುಚ್ಚಿಹಾಕಲು ಹೀಗೆ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು.

ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರದ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

Similar News