ಆಪ್ತರ ಜೊತೆ ಚರ್ಚಿಸಿ ತೀರ್ಮಾನ: ಕಾಂಗ್ರೆಸ್ ಸೇರುವ ಸುಳಿವು ನೀಡಿದ ಸಚಿವ ನಾರಾಯಣ ಗೌಡ

Update: 2023-03-02 12:21 GMT

ಮಂಡ್ಯ: ಕೆ. ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ, ಸಚಿವ ಕೆ.ಸಿ. ನಾರಾಯಣ ಗೌಡ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಗೌಡ, ಕಾಂಗ್ರೆಸ್ ನಿಂದ ಆಹ್ವಾನ ಬಂದಿರೋದು ನಿಜ. ಆದರೆ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆಪ್ತರು ಹಾಗೂ ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅಭಿಪ್ರಾಯ ಕೇಳಿದ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುವುದು ಎಂದು ಹೇಳಿದ್ದಾರೆ. 

ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಕೆ.ಸಿ ನಾರಾಯಣ ಗೌಡ ಬಳಿಕ ಬಿಎಸ್‌ವೈ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು. ನಂತರ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿರುವ ಕೆ.ಸಿ ನಾರಾಯಣ ಗೌಡ ಅವರು ಸದ್ಯ ಬಿಜೆಪಿ ತೊರೆಯುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.  

Similar News