ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನಟ ಸಾಧು ಕೋಕಿಲ ನೇಮಕ
ಬೆಂಗಳೂರು: ಹಾಸ್ಯ ನಟ, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಕ್ಷದ ಶಾಲು ಹೊದಿಸಿ ಹಾಗೂ ಹೂಗುಚ್ಛ ನೀಡಿ ಸಾಧುಕೋಕಿಲ ಅವರನ್ನು ಅಭಿನಂದಿಸಿದರು.
ಸಾಧು ಕೋಕಿಲ ಅವರು ಈ ಹಿಂದೆ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ಸೇರಿ ಇತ್ತೀಚೆಗೆ ಪ್ರಜಾಧ್ವನಿ ಯಾತ್ರೆಯಲ್ಲೂ ಕಾಣಿಸಿಕೊಂಡಿದ್ದರು.
''ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ'' ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ.
— DK Shivakumar (@DKShivakumar) March 2, 2023
-ಶುಭವಾಗಲಿ pic.twitter.com/og31KBCeO0