ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕನ ಪುತ್ರ

Update: 2023-03-02 17:32 GMT

ಬೆಂಗಳೂರು, ಮಾ.2: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ (KSDL) ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.

ಶಾಸಕರ ಪುತ್ರ ಮಾಡಾಳ್ ಪ್ರಶಾಂತ್  ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಬೇಡಿಯಿಟ್ಟಿದ್ದರೆನ್ನಲಾಗಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.

ಪ್ರಶಾಂತ್‌ ಬಿಡಬ್ಲ್ಯು ಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. 

Similar News