×
Ad

ಉಡುಪಿ: ಯುವತಿ ನಾಪತ್ತೆ

Update: 2023-03-02 22:19 IST

ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಯುವತಿ ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನುಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Similar News