ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ದಿಲ್ಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

Update: 2023-03-03 09:17 GMT

ಹೊಸದಿಲ್ಲಿ: ಜ್ವರದ ಕಾರಣ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೊಸದಿಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಹಾಗೂ  ಅವರ ತಂಡದ ಮೇಲ್ವಿಚಾರಣೆಯಲ್ಲಿ ಸೋನಿಯಾ ಗಾಂಧಿ ಅವರನ್ನು "ಜ್ವರದ ಕಾರಣ" ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ.ಎಸ್. ರಾಣಾ ಹೇಳಿದರು.

"ಸೋನಿಯಾ ಗಾಂಧಿ ಅವರು ನಿಗಾದಲ್ಲಿದ್ದಾರೆ ಹಾಗೂ ಅವರು ತಪಾಸಣೆಗೆ ಒಳಗಾಗುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ" ಎಂದು ಆಸ್ಪತ್ರೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

76ರ ವಯಸ್ಸಿನ ಸೋನಿಯಾ ಅವರು ಈ ವರ್ಷ  ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಜನವರಿಯಲ್ಲಿ ಸೋನಿಯಾ ಗಾಂಧಿಯವರು ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ದಿಲ್ಲಿಯ ಆಸ್ಪತ್ರೆಗೆ ದಾಖಲಾಗಿದ್ದರು.

Similar News