ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ಮುಖಂಡರು ಪೊಲೀಸ್ ವಶಕ್ಕೆ

Update: 2023-03-04 10:40 GMT

ಬೆಂಗಳೂರು, ಮಾ.4: ಭ್ರಷ್ಟಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಬಳಿಯೇ ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದ ಪ್ರಕರಣ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಕೆಜೆ ಜಾರ್ಜ್ ಪಕ್ಷದ ಹಿರಿಯ ಮುಖಂಡರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.

Similar News