ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು

Update: 2023-03-04 14:57 GMT

ಕೋಟ, ಮಾ.4: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಬಸ್ ನಿಲ್ದಾಣ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.3ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ನಾರಾಯಣ ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಅತುಲ್ ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆ ದಾಟಲು ನಿಂತಿದ್ದ ನಾರಾಯಣ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News