ಎಚ್3 ಎನ್2 ವೈರಾಣು ಬಗ್ಗೆ ಆತಂಕಬೇಡ: ಆರೋಗ್ಯ ಸಚಿವ ಡಾ.ಸುಧಾಕರ್

Update: 2023-03-05 15:44 GMT

ಬೆಂಗಳೂರು, ಮಾ. 5: ‘ವಿವಿಧೆಡೆಗಳಲ್ಲಿ ಹರಡುತ್ತಿರುವ ಎಚ್3 ಎನ್2 ಪ್ರಭೇದ ಪತ್ತೆ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ನಾಳೆ(ಮಾ.6) ಅಧಿಕಾರಿಗಳು ಮತ್ತು ತಜ್ಞರ ಸಭೆ ಕರೆಯಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ಮಹಿಳೆಯರ ಆರೋಗ್ಯಕ್ಕಾಗಿ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಈಗಾಗಲೇ ಎಚ್3 ಎನ್2 ಪ್ರಭೇದದ ಕುರಿತು ಕೇಂದ್ರ ಸರಕಾರ ಮಾರ್ಗಸೂಚಿ ಹೊರಡಿಸಿದೆ ಹೊಸ ವೈರಾಣು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇಶದ ಕೆಲವು ರಾಜ್ಯಗಳಲ್ಲಿ ಕೆಮ್ಮು, ನೆಗಡಿ, ವಿಷಮಶೀತ ಜ್ವರ ಉಪಟಳದಿಂದ ಬಾಧಿತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಪ್ರಾಥಮಿಕ ವರದಿಗಳ ಪ್ರಕಾರ, ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರುತ್ತದೆ. ರಾಜ್ಯದಲ್ಲಿ ಅಂತಹ ಪ್ರಕರಣಗಳು ಸದ್ಯಕ್ಕೆ ಕಂಡು ಬಂದಿಲ್ಲ. ಆದರೂ ನಾಳಿನ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ದರ ನಿಗದಿ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು. ವೈರಾಣುವಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಸುಧಾಕರ್ ಮಾಹಿತಿ ನೀಡಿದರು.

Similar News