ಪಕ್ಕದ ಮನೆ ವ್ಯಕ್ತಿಯಿಂದಲೇ ಬಾಲಕಿಗೆ ಲೈಂಗಿಕ ದೌರ್ಜನ್ಯ: ಶಿಕ್ಷೆ ವಿಧಿಸಿದ ಕೋರ್ಟ್

Update: 2023-03-05 16:42 GMT

ಬೆಂಗಳೂರು, ಮಾ.5: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶಿಸಿದೆ.

ನಗರದ ಬ್ಯಾಟರಾಯನಪುರ ನಿವಾಸಿಯಾದ 38 ವರ್ಷದ ಕೃಷ್ಣಪ್ಪ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ, ಈತನ ಅಪರಾಧ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಎಫ್‍ಟಿಎಸ್‍ಸಿ 1ನೆ ನ್ಯಾಯಾಲಯದ ನ್ಯಾಯಪೀಠ, ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. 

ಪೊಕ್ಸೊ ಕಾಯ್ದೆಯ ಕಲಂ 8ರ ಅಡಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ಮತ್ತು ಐಪಿಸಿ ಸೆಕ್ಷನ್ 506ರ ಅಡಿ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ. 

ಆರೋಪಿ ವಿರುದ್ಧ ಬ್ಯಾಟರಾಯನಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ವಿಚಾರಣೆ ವೇಳೆ 15 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಅರಸೀಕೆರೆ: ಮೇಕಪ್ ಎಡವಟ್ಟಿನಿಂದಾಗಿ ಮದುವೆಯೇ ರದ್ದು!

Similar News