ಸಜೀಪ ಮುನ್ನೂರು: ಕಾಂಗ್ರೆಸ್ 'ಯುವ ಸಂಕಲ್ಪ' ಕಾರ್ಯಕ್ರಮ
ಬಂಟ್ವಾಳ, ಮಾ.6: ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಆರು ವಲಯಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ 'ಯುವ ಸಂಕಲ್ಪ' ಕಾರ್ಯಕ್ರಮವು ತೊಡಂಬಿಲ ಚರ್ಚ್ ಹಾಲ್ ನಲ್ಲಿ ಇತ್ತೀಚೆಗೆ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಸಮಿತಿ ಅಧ್ಯಕ್ಷ ಇಬ್ರಾಹೀಂ ನವಾಝ್ ಬಡಕಬೈಲ್ ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಯುವ ಕಾಂಗ್ರೇಸ್ ಮುಖಂಡ ಸುಹೈಲ್ ಕಂದಕ್, ಅಮ್ಮುಂಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಸಜೀಪ ಮೂಡ ವಲಯ ಕಾಂಗ್ರೆಸ್ ಅಧ್ಯಕ್ಷ ಎನ್.ಅಬ್ದುಲ್ ಕರೀಂ, ಯುವ ಮುಖಂಡ ವಿನಯ್ ಕುಮಾರ್ ಸಿಂಧ್ಯಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಮಾನಾಥ ಶೆಟ್ಟಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.