ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗಳಿಗೆ ತಲುಪಿಸಿದ ಐವನ್ ಡಿಸೋಜ
Update: 2023-03-06 19:42 IST
ಮಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ ಫಳ್ನೀರ್ ವಾರ್ಡಿನ 160 ಮನೆಗಳಿಗೆ ತೆರಳಿ ಕಾಂಗ್ರೆಸ್ ಭರವಸೆಯ ಗ್ಯಾರಂಟಿ ಕಾರ್ಡ್ ವಿತರಿಸಿದರು.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ 200 ಯುನಿಟ್ ವಿದ್ಯುತ್, ಮನೆಯೊಡತಿಗೆ ಪ್ರತಿ ತಿಂಗಳು 2000 ರೂ. ಮತ್ತು ಬಿಪಿಎಲ್ ಕಾರ್ಡುದಾರರಿಗೆ 5 ಕೆ.ಜಿ ಅಕ್ಕಿ ಉಚಿತ ಗ್ಯಾರಂಟಿ ಪ್ರಸ್ತಾವನೆಯ ಮಾಹಿತಿ ನೀಡಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡಿದರು.
ಈ ಸಂದರ್ಭ 166 ಬೂತ್ ಅಧ್ಯಕ್ಷ ಅನಿಲ್ ಲೋಬೊ, ಬೂತ್‌ನ ಕಾರ್ಯಕರ್ತರಾದ ನೈಜಿಲ್ ಮೆಂತೆರೊ, ಅನಿಲ್ ತೊರಸ್, ಶ್ವೇತು ಸುವರ್ಣ, ಮಾಜಿ ಕಾರ್ಪೋರೇಟರ್ ಭಾಸ್ಕರ್ ರಾವ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು