×
Ad

ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗ ಭೇಟಿ

Update: 2023-03-06 19:53 IST

ಮಂಗಳೂರು : ಮಂಗಳೂರು ನಗರ ನೂತನ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್. ಜೈನ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಅವರನ್ನು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್‌ರ ನಿರ್ದೇಶನದಂತೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ನಿಯೋಗವು ಭೇಟಿ ಮಾಡಿ ಪ್ರಸ್ತುತ ವಿದ್ಯಾಮನದ ಕುರಿತು ಚರ್ಚಿಸಿತು.

ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಕೆ.ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ,  ಕಾರ್ಯದರ್ಶಿಗಳಾದ ಸಿ.ಎಂ. ಮುಸ್ತಫ, ಅಹ್ಮದ್ ಬಾವ ಬಜಾಲ್, ಸಿ.ಎಂ. ಹನೀಫ್, ಸಂಘಟನಾ ಕಾರ್ಯದರ್ಶಿ ಬಿ.ಎಸ್. ಇಮ್ತಿಯಾಝ್ ನಿಯೋಗದಲ್ಲಿದ್ದರು.

Similar News