ಮಾರ್ಚ್ 9ರಿಂದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ
Update: 2023-03-06 20:12 IST
ಉಡುಪಿ, ಮಾ.6: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 9ರಿಂದ 29ರವರೆಗೆ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.