×
Ad

ಹೋಳಿ ಮೆರವಣಿಗೆ: ಮದ್ಯ ಮಾರಾಟ ನಿಷೇಧ

Update: 2023-03-06 20:14 IST

ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಂಕಣ ಖಾರ್ವಿ ಸಮಾಜದವರು ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಮಾರ್ಚ್ 8ರ ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.  

Similar News