ಉಡುಪಿ: ಮಾ.9ರಂದು ಮಿನಿ ಉದ್ಯೋಗ ಮೇಳ

Update: 2023-03-06 14:46 GMT

ಉಡುಪಿ, ಮಾ.6: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 9ರಂದು ಬೆಳಗ್ಗೆ 10:30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವೊಂದು ನಡೆಯಲಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ. 

ಹೆಚ್ಚಿನ ಮಾಹಿತಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News