ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2023-03-06 21:10 IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರ ಚೌಕಿ ಸಮೀಪದ ಕೋಡಿಕಲ್ ಕ್ರಾಸ್ ಬಳಿ ಶನಿವಾರ ರಾತ್ರಿ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಮಹಾವೀರ್ ಸಿಂಗ್ ಮೃತಪಟ್ಟ ಬೈಕ್ ಸವಾರ. ಬೈಕ್‌ನಲ್ಲಿ ತೆರಳುತ್ತಿದ್ದ ಇವರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ನಗರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಮಹಾವೀರ್ ಸಿಂಗ್‌ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿಮಧ್ಯೆಯೇ ಮಹಾವೀರ್ ಸಿಂಗ್ ಮೃತಪಟ್ಟರು. ಕಾರು ಚಾಲಕ ಅಮಲು ಪದಾರ್ಥ ಸೇವನೆ ಮಾಡಿದ್ದನೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.