ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿಯ ಬಂಧನ

Update: 2023-03-07 05:49 GMT

ವಾಶಿಂಗ್ಟನ್: ಲಾಸ್ ಏಂಜಲೀಸ್ ನಿಂದ ಬೋಸ್ಟನ್ ಗೆ ಪ್ರಯಾಣಿಸುತ್ತಿದ್ದ ಯುನೈಟೆಡ್ ಏರ್ ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಅದನ್ನು ತಡೆಯಲು ಹೋದ ಗಗನ ಸಖಿಯ ಕುತ್ತಿಗೆಗೆ ಇರಿಯಲು ಯತ್ನಿಸಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿ ಆರೋಪಿ ಲಿಯೋ ಮಿನ್ ಸ್ಟರ್ ನ ಫ್ರಾನ್ಸಿಸ್ಕೊ ಟೊರೆಸ್(33 ವರ್ಷ)ಎಂಬಾತನನ್ನು ಬೋಸ್ಟನ್ ಲೋಗನ್ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ತಿಳಿಸಿದೆ.

ಫ್ರಾನ್ಸಿಸೊ ಟೊರೆಸ್ ಅಪಾಯಕಾರಿ ಆಯುಧ ಬಳಸಿ ವಿಮಾನ ಸಿಬ್ಬಂದಿಯನ್ನು ಇರಿಯಲು ಯತ್ನಿಸಿದ್ದಾನೆ ಎಂದು ನ್ಯಾಯಾಂಗ ಇಲಾಖೆ ತಿಳಿಸಿದೆ.

ಟೊರೆಸ್ ನನ್ನು ರವಿವಾರ ಸಂಜೆ ಬೋಸ್ಟನ್ ಲೋಗನ್ ಅಂತರ್ ರಾಷ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾ.9ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.

Similar News