ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗಿ ಐದನೇ ಅವಧಿಗೆ ನೇಫಿಯು ರಿಯೊ ಪ್ರಮಾಣವಚನ
Update: 2023-03-07 14:19 IST
ಹೊಸದಿಲ್ಲಿ: ನಾಗಾಲ್ಯಾಂಡ್‌ನ ರಾಜಕೀಯ ಮುತ್ಸದ್ದಿ ಹಾಗೂ ಆ ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನೇಫಿಯು ರಿಯೊ ಅವರು ತಮ್ಮ ಪಕ್ಷ ಹಾಗೂ ಅದರ ಮಿತ್ರ ಪಕ್ಷವಾದ ಬಿಜೆಪಿಯೊಂದಿಗೆ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಐದನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪದವಿ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.
60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಎರಡು ಪಕ್ಷಗಳು ಒಟ್ಟಾಗಿ 33 ಸ್ಥಾನಗಳನ್ನು ಪಡೆದುಕೊಂಡಿವೆ.