×
Ad

ಜಾಮೀನು ಸಿಕ್ಕ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್‌ ಮನೆ ಬಳಿ ಪ್ರತ್ಯಕ್ಷ: ತೆರೆದ ವಾಹನದಲ್ಲಿ ಮೆರವಣಿಗೆ

Update: 2023-03-07 16:24 IST

ಬೆಂಗಳೂರು: ಲಂಚ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 6 ದಿನಗಳ ಬಳಿಕ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿರುವ ಅವರ ನಿವಾಸಕ್ಕೆ ವಾಪಸ್‌ ಆಗಿದ್ದಾರೆ.

ವಿರೂಪಾಕ್ಷಪ್ಪ ಅವರು ಮಂಗಳವಾರ ತನ್ನ ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ್ದಾರೆ.

ಇನ್ನು ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯವು ಶಾಸಕರಿಗೆ ಸೂಚನೆ ನೀಡಿದೆ.

''ತನಿಖಾಧಿಕಾರಿ ಮುಂದೆ ಹಾಜರಾಗುತ್ತೇನೆ'':

''ಕೆಎಸ್​ಡಿಎಲ್​ ಅಧ್ಯಕ್ಷನಾಗಿ ನಿಯಮಬಾಹಿರ ಕೆಲಸ ಮಾಡಿಲ್ಲ. ಪಕ್ಷಕ್ಕೆ ಎಂದೂ ದ್ರೋಹ ಮಾಡುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಬ್ಬ ಶಾಸಕ ಅಂತ ನೋಡದೇ ನಿಷ್ಪಕ್ಷಪಾತ ತನಿಖೆ ಮಾಡುವುದಾಗಿ ಹೇಳಿದ್ದಾರೆ. ಆಡಳಿತ ಪಕ್ಷದ ಶಾಸನಕ ಮೇಲೆ ಈ ರೀತಿ ದಾಳಿ ನಡೆದಿದ್ದು ಇತಿಹಾಸದಲ್ಲೇ ಮೊದಲು. 48 ಗಂಟೆಯೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗುತ್ತೇನೆ. ದೋಷ ಮುಕ್ತನಾಗಿ ಬರುತ್ತೇನೆ''

- ಮಾಡಾಳ್ ವಿರೂಪಾಕ್ಷಪ್ಪ- ಶಾಸಕ

ಇದನ್ನೂ ಓದಿ: ಟೆಂಡರ್‌ ಗಾಗಿ ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

Similar News